ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್…

ಬೆಂಗಳೂರು,ಜನವರಿ,8,2021(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್  ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.jk-logo-justkannada-mysore

 ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೆಲವು ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ವಜಾ ಮಾಡಿತ್ತು. ಅದನ್ನು ಪ್ರಶ್ನಿಸಿ ರಾಗಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.Supreme Court -adjourns - next week- hearing - plea -y Kannada film actress,-Ragini Dwivedi,

ರಾಗಿಣಿ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರು ಈಗಾಗಲೇ ಆಕ್ಷೇಪಣೆ ಸಲ್ಲಿಸಿದ್ದಾರೆ.
ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ರಾಗಿಣಿ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇನ್ನು ಸಿಸಿಬಿ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ನಟಿ ರಾಗಿಣಿ ವಿರುದ್ಧ ಎನ್ ಡಿಪಿಎಸ್ ಆಕ್ಟ್ 27ರಡಿ ಪ್ರಕರಣ ದಾಖಲಾಗಿದ್ದು, ಯಾವುದೇ ಕಾರಣ ಜಾಮೀನು ನೀಡಬಾರದು ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದರು.

ENGLSIH SUMMARY…

Supreme Court adjourns for next week hearing in plea filed by Kannada film actress, Ragini Dwivedi, seeking bail in an alleged drug case.

Key words: Supreme Court -adjourns – next week- hearing – plea -y Kannada film actress,-Ragini Dwivedi,