ಅನರ್ಹ ಶಾಸಕರ ಅರ್ಜಿ ವಿಚಾರಣೆ ವಾದ –ಪ್ರತಿವಾದ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್…

ನವದೆಹಲಿ,ಅ,25,2019(www.justkananda.in): ತಮ್ಮನ್ನ ಅನರ್ಹಗೊಳಿಸಿದ್ದ ಹಿಂದಿನ ಸ್ಪೀಕರ್ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಅಂತ್ಯವಾಗಿದ್ದು ಸುಪ್ರೀಂಕೋರ್ಟ್ ತೀರ್ಪನ್ನ ಕಾಯ್ದಿರಿಸಿದೆ.

ಸುಪ್ರೀಂಕೋರ್ಟ್ ನಲ್ಲಿ ಅಕ್ಟೋಬರ್ 22 ರಿಂದ ಸತತ ನಾಲ್ಕು ದಿನಗಳ ಕಾಲ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯಿತು.  ಕಾಂಗ್ರೆಸ್ ಪರ ಕಪಿಲ್ ಸಿಬಲ್, ದೇವದತ್ ಕಾಮತ್ ವಾದ ಮಂಡಿಸಿದರು. ಜೆಡಿಎಸ್ ಪರ ರಾಜೀವ್ ಧವನ್ ಅನರ್ಹ ಶಾಸಕರ ಪರ ವಿ.ಗಿರಿ ಸೇರಿ ಬೇರೆ ವಕೀಲರು ವಾದ ಮಂಡಿಸಿದ್ದರು.

ಇನ್ನು ಸುಪ್ರೀಂಕೋರ್ಟ್ ನಲ್ಲಿ ಶಾಸಕರ ಅನರ್ಹತೆ ಪ್ರಕರಣ ವಿಚಾರಣೆ ಅಂತ್ಯವಾಗಿದ್ದು ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ತೀರ್ಪನ್ನ ಕಾಯ್ದಿರಿಸಿದೆ. ದೀಪಾವಳಿ ರಜೆ ಬಳಿಕ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ಗೆ ನವೆಂಬರ್ 4ರವರೆಗೆ ರಜೆ ಇದೆ ಎಂದು ಹೇಳಲಾಗುತ್ತಿದ್ದು ಹೀಗಾಗಿ ನವೆಂಬರ್ ಮೊದಲ ವಾರ ತೀರ್ಪು ಹೊರಬೀಳುವ ಸಾಧ್ಯತೆ ಇದೆ.

Key words: supreme court-disqualified MLA- petition –reserved- judgment.