ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿ ರಚಿಸಿದ ಸುಪ್ರೀಂಕೋರ್ಟ್.

Promotion

ನವದೆಹಲಿ,ಮಾರ್ಚ್,2,2023(www.justkannada.in): ಚುನಾವಣಾ ಆಯುಕ್ತರ ನೇಮಕಕ್ಕೆ  ಮೂವರು ಸದಸ್ಯರನ್ನೊಳಗೊಂಡ ಹೊಸ ಸಮಿತಿಯನ್ನ ಸುಪ್ರೀಂಕೋರ್ಟ್​ ರಚಿಸಿದೆ.

ಹೊಸ ಸಮಿತಿಯಲ್ಲಿ ಪ್ರಧಾನಿ, ಭಾರತದ ಮುಖ್ಯ ನ್ಯಾಯಮೂರ್ತಿಗಳು ಮತ್ತು ವಿರೋಧ ಪಕ್ಷದ ನಾಯಕರು ಇರುತ್ತಾರೆ. ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂ ಈ ತೀರ್ಪು ನೀಡಿದೆ.

ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠವು ಈ ನೇಮಕಾತಿಗಳಿಗೆ ಸಂಸತ್ತು ಕಾನೂನು ರಚಿಸುವವರೆಗೆ ಈ ನಿಯಮವು ಮುಂದುವರಿಯುತ್ತದೆ ಎಂದು ಹೇಳಿದೆ.

Key words: Supreme Court -formed – new committee – appointment – Election Commissioner.