ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂಕೋರ್ಟ್

ನವದೆಹಲಿ,ಆಗಸ್ಟ್,19,2021(www.justkannada.in):  ಮಾಜಿ ಸಚಿವ ಜನಾರ್ಧನರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂಕೊರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

ಈ ಮೂಲಕ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅಕ್ರಮ ಗಣಿಗಾರಿಕೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಗೆ ತೆರಳದಂತೆ ಮಾಜಿಸಚಿವ ಜನಾರ್ಧನರೆಡ್ಡಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ  ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ವಿನೀತ್ ಶರಣ್ ಅವರಿದ್ಧ ನ್ಯಾಯಪೀಠ, ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ ನೀಡಿದೆ.

ಬಳ್ಳಾರಿಗೆ ಹೋದಾಗಲೆಲ್ಲಾ ಎಸ್ಪಿಗೆ ಮಾಹಿತಿ ನೀಡುವಂತೆ ಷರತ್ತು ವಿಧಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿತ್ತು. ಈ ಕುರಿತಂತೆ ಮತ್ತೆ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಸುಪ್ರಂಕೋರ್ಟ್ ಜಾಮೀನು ಷರತ್ತು ಮಾರ್ಪಾಡಿಸಿದೆ.

Key words: Supreme Court -granted -conditional permission – former minister -Janardhan Reddy – Bellary.