ಆಯೋಧ್ಯ ತೀರ್ಪು: ರಾಮ ಮಂದಿರ ನಿರ್ಮಾಣ ಜವಾಬ್ದಾರಿ ಕೇಂದ್ರ ಸರಕಾರಕ್ಕೆ, ಸುನ್ನಿ ಬೋರ್ಡ್’ಗೆ ಐದು ಎಕರೆ ಜಾಗ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ತೀರ್ಪನ್ನು ಪ್ರಕಟಿಸಿದೆ.

ವಿವಾದಿತ ಜಾಗ ರಾಮಲಲ್ಲಾ ಪಾಲಿಗೆ ಸೇರಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜತೆಗೆ ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸುವಂತೆ ನ್ಯಾಯಮೂರ್ತಿಗಳು ತೀರ್ಪು ನೀಡಿದ್ದಾರೆ.

ಸುನ್ನಿ ಬೋರ್ಡ್ ಗೆ ವಿಶೇಷ ಅಧಿಕಾರದಡಿ ಅಯೋಧ್ಯೆಯಲ್ಲಿಯೇ ಐದು ಎಕರೆ ಜಮೀನು ನೀಡುವಂತೆ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣದ ಜವಾಬ್ದಾರಿಯನ್ನು ಕೇಂದ್ರ ಸರಕಾರಕ್ಕೆ ವಹಿಸಲಾಗಿದೆ.

ಜತೆಗೆ ಇದರ ನಿರ್ಮಾಣ ಜವಾಬ್ದಾರಿಯನ್ನು ಟ್ರಸ್ಟ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ.