ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಆದೇಶ

ಬೆಂಗಳೂರು,ಜುಲೈ,28,2022(www.justkannada.in): ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ, ಬಿಬಿಎಂಪಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು. ಇನ್ನು ಒಂದು ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು.ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಕೂಡಲೆ ಚುನಾವಣಾ ಆಯೋಗ  ಬಿಬಿಎಂಪಿ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಆದೇಶ ನೀಡಿದೆ.

ಸದ್ಯ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ಹೊರಡಿಸಿಲ್ಲ. ಮುಂದಿನ ಒಂದು ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮೀಸಲಾತಿ ಬೆನ್ನಲ್ಲೇ ಚುನಾವಣೆಯನ್ನು ಘೋಷಣೆ ಮಾಡಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮೀಸಲಾತಿ ಪಟ್ಟಿ ಪ್ರಕಟಿಸಲು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಇಂದಿನಿಂದ ಒಂದು ವಾರ ಸಮಯ ನೀಡಿದೆ. ಭಕ್ತ ವತ್ಸಲ ವರದಿ ಸಲ್ಲಿಕೆ ವಿಳಂಬವಾಯಿತು. ಈ ಹಿನ್ನಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಲಿಲ್ಲ ಎಂದು ಸುಪ್ರೀಂ ಕೋರ್ಟ್ ಮುಂದೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ (8 ವಾರ) ಆರಂಭಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಮೇ 20ರಂದು ಸೂಚನೆ ನೀಡಿತ್ತು. ಈ ಸಂಬಂಧ ವಾರ್ಡ್​ ಪುನರ್​ವಿಂಗಡನೆ ಮತ್ತು ಮೀಸಲಾತಿಯನ್ನೂ ಕಾಲಮಿತಿಯೊಳಗೆ ನಿಗದಿಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನವನ್ನೂ ಕೋರ್ಟ್ ನೀಡಿತ್ತು. ಬಿಬಿಎಂಪಿ ಚುನಾವಣೆಗೆ ನೀಡಿದ್ದ 8 ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿತ್ತು.

Key words: Supreme Court –orders- BBMP – reservation list – elections -a week