Friday, September 18, 2026

BDA Apartments

ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋ...
Home Front Page ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

ನವದೆಹಲಿ,ಅಕ್ಟೋಬರ್,10,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ಧುಗೊಳಿಸಿದ್ಧ ಕರ್ನಾಟಕ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪೊಲೀಸ್ ಮಹಾಸಂಘ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ಕೈಗೆತ್ತುಕೊಂಡ  ನ್ಯಾಯಮೂರ್ತಿ ಚಂದ್ರಚೂಡ ನೇತೃತ್ವದ ಪೀಠ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಲ್ಲದೆ ಅರ್ಜಿಯನ್ನ ವಜಾಗೊಳಿಸಿದೆ.ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋ...

ಸಿದ್ಧರಾಮಯ್ಯ ಸಿಎಂ ಆಗಿದ್ಧ ವೇಳೆ ರಚನೆಯಾಗಿದ್ದ ಎಸಿಬಿಯನ್ನ ರದ್ಧುಗೊಳಿಸಿ ಇತ್ತೀಚೆಗೆ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೆ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

Key words:  Supreme Court  -petition – cancellation -order – ACB