ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

Promotion

ನವದೆಹಲಿ,ಅಕ್ಟೋಬರ್,10,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ಧುಗೊಳಿಸಿದ್ಧ ಕರ್ನಾಟಕ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪೊಲೀಸ್ ಮಹಾಸಂಘ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ಕೈಗೆತ್ತುಕೊಂಡ  ನ್ಯಾಯಮೂರ್ತಿ ಚಂದ್ರಚೂಡ ನೇತೃತ್ವದ ಪೀಠ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಲ್ಲದೆ ಅರ್ಜಿಯನ್ನ ವಜಾಗೊಳಿಸಿದೆ.

ಸಿದ್ಧರಾಮಯ್ಯ ಸಿಎಂ ಆಗಿದ್ಧ ವೇಳೆ ರಚನೆಯಾಗಿದ್ದ ಎಸಿಬಿಯನ್ನ ರದ್ಧುಗೊಳಿಸಿ ಇತ್ತೀಚೆಗೆ ಹೈಕೋರ್ಟ್ ಆದೇಶಿಸಿತ್ತು. ಅಲ್ಲದೆ ಲೋಕಾಯುಕ್ತಕ್ಕೆ ಹೆಚ್ಚಿನ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.

Key words:  Supreme Court  -petition – cancellation -order – ACB