ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: ಸಿಎಎ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಸೂಚನೆ….

ನವದೆಹಲಿ, ಜ,22,2020(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಸಿಎಎ ಬಗ್ಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಸಿಎಎ ವಿರುದ್ದ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನ ಇಂದು ಮುಖ್ಯನ್ಯಾಯಮೂರ್ತಿ ಎಸ್.ಎ ಬೋಬ್ಡೆ ನೇತೃತ್ವದ ಪೀಠ ಕೈಗೆತ್ತುಕೊಂಡಿತ್ತು.   ಅರ್ಜಿಗಳ ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆಗೆ ಮುಂದಾಗಿರುವ ಸುಪ್ರೀಂಕೋರ್ಟ್, ಈ ಅರ್ಜಿಗಳ ಕುರಿತಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಸಮಾಯವಕಾಶ ನೀಡಿದೆ.

ಇನ್ನು ಕೇಂದ್ರಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ್, ಸರ್ಕಾರಕ್ಕೆ 143 ಅರ್ಜಿಗಳಲ್ಲಿ 60 ಅರ್ಜಿಗಳು ಬಂದಿವೆ. ಇವುಗಳಿಗೆ ಉತ್ತರಿಸಲು ಕಾಲಾವಕಾಶ ಬೇಕು ಎಂದರು. ಈ ನಡುವೆ ಹಿರಿಯ ವಕೀಲ ಕಪಿಲ್ ಸಿಬಲ್, ಸಿಎಎ ಪ್ರಕ್ರಿಯೆಗಳಿಗೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಸಿಎಎಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಉತ್ತರ ನೀಡಲು ನಾಲ್ಕು ಕಾಲಾವಕಾಶ ನೀಡಿತು. ಇನ್ನು ಸಿಎಎ ಕುರಿತು ವಿಚಾರಣೆ ನಡೆಸದಂತೆ ಹೈಕೋರ್ಟ್ ಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

Key words: Supreme Court –refuse- stay-Citizenship Amendment Act