ಮಂಗಳೂರು ಏರ್ ಪೋರ್ಟ್ ನಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ: ಪೊಲೀಸರಿಂದ ಪರಿಶೀಲನೆ…

Promotion

ಮಂಗಳೂರು,ಜ,20,2020(www.justkannada.in):  ಮಂಗಳೂರು ಏರ್ ಪೋರ್ಟ್ ನಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದ್ದು ಮಂಗಳೂರು ಪೊಲೀಸರು ಸ್ಥಳಕ್ಕೆದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆಯಾಗಿದೆ.  ಸ್ಥಳಕ್ಕೆ ಬಾಂಬ್ ನಿಷ್ಕ್ರಿಯಾ ದಳ ಶ್ವಾನದಳ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಪತ್ತೆಯಾಗಿರುವ ಬ್ಯಾಗ್‌ ಲ್ಯಾಪ್‌ಟಾಪ್‌ ಬ್ಯಾಗ್‌ ಎನ್ನಲಾಗಿದ್ದು, ಬ್ಯಾಗ್ ಪರಿಶೀಲನೆ ನಡೆಸಲಾಗುತ್ತಿದೆ.

ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳದ ಸುತ್ತ ಪೊಲೀಸರು  ಸುತ್ತವರೆದಿದ್ದು ಪರಿಶೀಲನೆ ಮುಂದುವರೆದಿದೆ.

Key words: Suspected bag- found – Mangalore airport- Inspection – police.