ಪರಿಷತ್ ನಲ್ಲಿ ಗೂಂಡಾಗಿರಿ ಮಾಡಿದವರ ಅಮಾನತು ಮಾಡಲಿ;  ಕಾಂಗ್ರೆಸ್ ನಡೆ ಬಗ್ಗೆ ಸಚಿವ ಎಸ್ ಟಿ ಸೋಮಶೇಖರ್ ಅಸಮಾಧಾನ…

Promotion

ಮೈಸೂರು,ಡಿಸೆಂಬರ್,16,2020(www.justkannnada.in):  ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಆಗ್ರಹಿಸಿದರು.I didn't knew CM BSY will think so cheaply - KPCC President D.K. Shivakumar

ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ಗೌರವಾನ್ವಿತ ಹಿರಿಯ ಸದಸ್ಯರೂ ಉಪ ಸಭಾಪತಿಗಳಾದ ಧರ್ಮೇಗೌಡರನ್ನು ಎಳೆದಾಡಿ ಗೂಂಡಾಗಿರಿ ಮಾಡಿದ ಹಾಗೆ ಬಲತ್ಕಾರವಾಗಿ ಖುರ್ಚಿಯಿಂದ ಎಳೆದಾಡಿದ್ದು ಖಂಡನೀಯ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು  ಅಸಮಾಧಾನ ವ್ಯಕ್ತಪಡಿಸಿದರು.

ಗೂಂಡಾಗಿರಿ ಮಾಡಿದವರನ್ನು ಕಾಂಗ್ರೆಸ್ ಅಮಾನತು ಮಾಡಲಿ

ಕಾಂಗ್ರೆಸ್ ನವರಿಗೆ ಮರ್ಯಾದೆ ಉಳಿಸಿಕೊಳ್ಳಬೇಕೆಂದಿದ್ದರೆ ಹೀಗೆ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಬೇಕು. ಚಿಂತಕರ, ಬುದ್ದಿವಂತರ ಚಾವಡಿ ಎಂದೇ ಹೆಸರಾಗಿದ್ದ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಇಂತಹ ಒಂದು ಕೀಳುಮಟ್ಟದ ರಾಜಕೀಯಕ್ಕೆ ಇಳಿಯುತ್ತದೆ ಎಂದರೆ ಹೇಗೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಪ್ರಶ್ನಿಸಿದರು.

ಸಭಾಪತಿಗಳ ಮೇಲೆ ಆರೋಪ ಬಂದ ಮೇಲೆ ಅವರು ಆ ಖುರ್ಚಿಯಲ್ಲಿ ಕೂರುವಂತಿಲ್ಲ. ಅವಿಶ್ವಾಸ ನಿರ್ಣಯ ಗೊತ್ತುವಳಿಯಾದ ಮೇಲೆ ಸಭಾಪತಿಗಳಾದವರು ಖುರ್ಚಿಯನ್ನು ಬಿಟ್ಟುಕೊಡಬೇಕು. 14 ದಿನದ ಅವಧಿಯಲ್ಲಿ ಅವಕಾಶ ಕಲ್ಪಿಸಿ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು. ಆದರೆ, ಅದಕ್ಕೆ ಅವಕಾಶ ಕೊಡದ ಸಭಾಪತಿಗಳ ನಡೆ ಸರಿಯಲ್ಲ ಎಂದು ಸಚಿವ ಎಸ್.ಟಿ ಸೋಮಶೇಖರ್ ಖಂಡಿಸಿದರು.

ಕಾಂಗ್ರೆಸ್ ನವರ ಷಡ್ಯಂತ್ರ

ಇದು ನೂರಕ್ಕೆ ನೂರು ಕಾಂಗ್ರೆಸ್ ನವರ ಪೂರ್ವನಿಯೋಜಿತ ಸಂಚು. ಕಾಂಗ್ರೆಸ್ ಶಾಸಕಾಂಗ ಪಕ್ಷದಲ್ಲಿಯೇ ಗೂಂಡಾಗಿರಿ ಮಾಡುವ ಹಾಗೂ ದಾಂಧಲೆ ಮಾಡುವ ಬಗ್ಗೆ ತೀರ್ಮಾನಿಸಲಾಗಿದೆ. ಇದು ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ಹೇಳಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ನಂ. 23ರ ಸ್ವಾತಂತ್ರ್ಯ ಉದ್ಯಾನವನದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ,  ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಅಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.suspension-roit-legislative-council-minister-st-somashekhar-congress

ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರ ಭವನಕ್ಕೆ ಭೇಟಿ ನೀಡಿದ ಸಚಿವರಾದ ಸೋಮಶೇಖರ್ ಅವರು, ಸ್ವಾತಂತ್ರ್ಯ ಹೋರಾಟಗಾರರಾದ ವೈ.ಸಿ.ರೇವಣ್ಣ ಅವರುಸಚಿವರ ಬಳಿ ಸಮಸ್ಯೆಗಳನ್ನು ಹೇಳಿ ಮನವಿ ಪತ್ರ ಸಲ್ಲಿಸಿದರು. ಅವರಿಂದ ಅಹವಾಲನ್ನು ಆಲಿಸಿದ ಸಚಿವ ಎಸ್.ಟಿ ಸೋಮಶೇಖರ್, ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

English summary….

Minister S.T. Somashekar demands Cong. members who created ruckus in LC should be suspended
Mysuru, Dec. 16, 2020 (www.justkannada.in): ” The position of Chairman of the Legislative Council is respectable. But what does it mean if a first time MLC sits in it?! Wasn’t opposition leader Siddaramaiah aware of the no-confidence motion tabled by our party members? He teaches law and rules to everyone, let him teach his party leaders first, let him suspend those who behaved like goondas in the council,” said Mysuru District In-charge Minister S.T. Somashekar.
Speaking to the media persons after launching various developmental works in Chamaraja Assembly Constituency today, he criticized the incident that happened in the legislative council, where a few congress members pulled the respectable Deputy Speaker Dharmegowda from his chair. He said it shows Congress culture.suspension-roit-legislative-council-minister-st-somashekhar-congress
The Chairman should not sit in his chair after facing allegations. He should quit his seat after tabling the no-confidence motion. But it is incorrect on his part for not giving opportunity in the 14 days of the session. He also termed the incident as pre-planned by Congress.
Keywords: Legislative Council/ Chairman/ S. T. Somashekar/ Suspend
————————————-

Key words: suspension –roit- legislative council-Minister-ST Somashekhar – Congress