ಕೊರೊನಾ ಮೂರನೇ ಅಲೆ ಆತಂಕವಿದೆ, ತಪ್ಪದೇ ಲಸಿಕೆ ಪಡೆಯಿರಿ ಎಂದ ಸುತ್ತೂರು ಶ್ರೀ

ಮೈಸೂರು, ಆಗಸ್ಟ್ 1, 2021 (www.justkannada.in): ಕೊರೊನಾ ವೈರಸ್ ಸೋಂಕಿನ ಮೂರನೇ ಅಲೆ ಎದುರಾಗುವ ಆತಂಕವಿದೆ. ಕೊರೊನಾ 3ನೇ ಅಲೆ ಬರಲೂಬಹುದು, ಬರದೆಯೂ ಇರಬಹುದು. ಆದರೂ ಕೊರೊನಾ ಮೂರನೇ ಅಲೆ ಬರದಂತೆ ತಡೆಯಲು ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಲಹೆ ನೀಡಿದ್ದಾರೆ.

ಕೊರೊನಾ ಲಸಿಕೆ ಬಗ್ಗೆ ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿವೆ. ಜನರು ಅದಕ್ಕೆ ಕಿವಿಗೊಡದೇ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಮಾಡಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸರ್ಕಾರ ಜಾರಗೊಳಿಸಿರುವ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದುಶ್ರೀಗಳು ಕಿವಿಮಾತು ಹೇಳಿದ್ದಾರೆ.

ನಿಯಮ ಪಾಲಿಸಿದರೆ ಮಾತ್ರ ಕೊರೊನಾವನ್ನು ನಿಯಂತ್ರಣ ಮಾಡಲು ಸಾಧ್ಯ. ಜೆ ಎಸ್ ಎಸ್ ಆಸ್ಪತ್ರೆಯಲ್ಲೂ ಕೊರೊನಾ ಮೂರನೇ ಅಲೆ ಎದುರಿಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜನರು ಮೈ ಮರೆಯದೇ ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.