Thursday, August 6, 2026

BDA Apartments

Home Front Page ವಿಶ್ವೇಶತೀರ್ಥ ಸ್ವಾಮೀಜಿ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ, ಬೆಂಗಳೂರಲ್ಲಿ ಅಂತ್ಯಕ್ರಿಯೆ

ವಿಶ್ವೇಶತೀರ್ಥ ಸ್ವಾಮೀಜಿ ನಿಧನ: ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ, ಬೆಂಗಳೂರಲ್ಲಿ ಅಂತ್ಯಕ್ರಿಯೆ

ಬೆಂಗಳೂರು, ಡಿಸೆಂಬರ್ 29, 2019 (www.justkannada.in): ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.

ಮಣಿಪಾಲದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದರು.

ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿ ಆಶಯದಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಬೃಂದಾವನ ನಿರ್ಮಿಸಲಾಗುವುದು. ನಂತರ ಸೇನಾ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಕರೆತರಲಾಗುವುದು, ನಂತರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.