ಟಿ-20 ವಿಶ್ವಕಪ್ ಕ್ರಿಕೆಟ್: ಇಂದು ದಕ್ಷಿಣ ಆಫ್ರಿ್ಕಾ-ಟೀಂ ಇಂಡಿಯಾ ಬಿಗ್ ಫೈಟ್

Promotion

ಬೆಂಗಳೂರು, ಅಕ್ಟೋಬರ್ 30, 2022 (www.justkannada.in): ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಇಂದು ರೋಹಿತ್ ಪಡೆಗೆ ಮುಖಾಮುಖಿಯಾಗಿತ್ತಿದೆ.

ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್‌ನಲ್ಲಿ ಅದ್ಭುತ ತಂಡವಾಗಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಮ್ ಇಂಡಿಯಾ ಸರಿಯಾದ ಯೋಜನೆಗಳೊಂದಿಗೆ ಕಣಕ್ಕಿಳಿದರೆ ಗೆಲುವು ಕಟ್ಟಿಟ್ಟ ಬುತ್ತಿಯಾಗಿದೆ.

ಇಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಈ ಮೂರು ವಿಚಾರಗಳಲ್ಲಿ ಯಶಸ್ಸು ಸಾಧಿಸಿದರೆ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ದಕ್ಷಿಣ ಆಫ್ರಿಕಾ ಪಾಲಿಗೆ ಸಾವಾಲಾಗಲಿದೆ.

ಅಂದಹಾಗೆ ಟಿ20 ವಿಶ್ವಕಪ್‌ನಲ್ಲಿ ಭಾರತ ಅದ್ಭುತ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು ಈ ಆರಂಭವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸದಲ್ಲಿದೆ.

ಟೀಮ್ ಇಂಡಿಯಾ ಸಂಪೂರ್ಣ ಸ್ಕ್ವಾಡ್

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್