ಟಿ-20 ಅಂಗವಿಕಲರ ವಿಶ್ವಕಪ್‌ ಕ್ರಿಕೆಟ್‌ : ಟೀಂ ಇಂಡಿಯಾ ಚಾಂಪಿಯನ್

Promotion

ನವದೆಹಲಿ, ಆಗಸ್ಟ್ 15, 2019 (www.justkannada.in): ಅಂಗವಿಕಲರ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಟ್ರೋಫಿಗೆ ಮುತ್ತಿಕ್ಕಿದೆ.

ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ ಆತಿಥ್ಯದಲ್ಲಿ ನಡೆದ ಹತ್ತು ದಿನಗಳ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಭಾರತ ತಂಡ ಅಂಗವಿಕಲರ ಚೊಚ್ಚಲ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ನಿಗದಿತ 20 ಓವರ್‌ ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 180 ರನ್‌ ಗಳಿಸಿತು. ಈ ಗುರಿ ಬೆನ್ನತ್ತಿದ್ದ ಇಂಗ್ಲೆಂಡ್ 9 ವಿಕೆಟ್‌ ನಷ್ಟಕ್ಕೆ 144 ರನ್ ಗಳನ್ನಷ್ಟೇ ಗಳಿಸಿದರು. ಆ ಮೂಲಕ ಭಾರತದ ಎದುರು 36 ರನ್ ಗಳ ಸೋಲು ಕಂಡರು.