ತರಗತಿಯಲ್ಲಿ ಟೀ-ಶರ್ಟ್‌, ಜೀನ್ಸ್‌ ಪ್ಯಾಂಟ್‌ ಬ್ಯಾನ್! ಡಿಸಿ ಗಮನಕ್ಕೆ ತರದೇ ಡಿಡಿಪಿಯು ಆದೇಶ!?

Promotion

ಮೈಸೂರು, ನವೆಂಬರ್ 7, 2021: ಜಿಲ್ಲೆಯ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಟೀ-ಶರ್ಟ್‌ ಹಾಗೂ ಜೀನ್ಸ್‌ ಪ್ಯಾಂಟ್‌ ಧರಿಸುಂತಿಲ್ಲ ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಆದೇಶಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.

ನಾನು ಈ ರೀತಿಯ ಆದೇಶ ಹೊರಡಿಸಿಲ್ಲ. ಈ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಯೊಂದಿಗೆ ಮಾತನಾಡಿ, ಆದೇಶವನ್ನು ಹಿಂಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ವಿಷಯವನ್ನು ಗಮನಕ್ಕೆ ತರದೇ ಆದೇಶ ಹೊರಡಿಸಿರುವ ಬಗ್ಗೆ ಡಿಡಿಪಿಯು ಅವರಿಂದ ಸೂಕ್ತ ಕಾರಣ ಕೇಳಿದ್ದೇನೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.