ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಮತ್ತು ಆರ್ ಐ  ಎಸಿಬಿ ಬಲೆಗೆ…

Promotion

ಚಿತ್ರದುರ್ಗ,ನವೆಂಬರ್,30,2020(www.justkannada.in):   ಲಂಚ ಸ್ವೀಕರಿಸುತ್ತಿದ್ದ ವೇಳೆ  ತಹಶೀಲ್ದಾರ್ ಮತ್ತು  ಆರ್ ಐ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.logo-justkannada-mysore

ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಮತ್ತು ಆರ್ ಐ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ರಸ್ತೆ ನಿರ್ಮಾಣ ಗುತ್ತಿಗೆದಾರ ಪ್ರೀತಂ ಎಂಬುವವರ ಬಳಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇಂದು ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.tahsildar-ri-acb-trap-bribed

ಎಸಿಬಿ ಎಸ್ ಪಿ ಜಯ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಇದೀಗ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Key words: Tahsildar – RI –ACB- trap -bribed.