ಲಸಿಕೆ ಕೊಟ್ಟ ಬಳಿಕ ಶಾಲಾ-ಕಾಲೇಜು ಆರಂಭದ ಬಗ್ಗೆ ಚರ್ಚೆ- ಸಚಿವ ಡಾ.ಕೆ.ಸುಧಾಕರ್.

Promotion

ಚಿಕ್ಕಬಳ್ಳಾಪುರ,ಜೂನ್,23,2021(www.justkannada.in):  ಲಸಿಕೆ ಕೊಟ್ಟ ಬಳಿಕ ರಾಜ್ಯದಲ್ಲಿ ಶಾಲೆ-ಕಾಲೇಜು ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.jk

 ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, ಶಾಲಾ-ಕಾಲೇಜು ಆರಂಭದ ಬಗ್ಗೆ ಗೊಂದಲ ಬೇಡ, ಲಸಿಕೆ ಕೊಟ್ಟ ಬಳಿಕ ಶಾಲಾ-ಕಾಲೇಜು ಆರಂಭದ ಬಗ್ಗೆ ಚರ್ಚೆ ಮಾಡಲಾಗುವುದು. ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಆರಂಭಿಸುತ್ತೇವೆ ಎಂದರು.

ಮೊದಲ ಹಂತದಲ್ಲಿ ಕಾಲೇಜುಗಳನ್ನ ಆರಂಭಿಸಲಾಗುತ್ತದೆ. ಕಾಲೇಜುಗಳ ಬಳಿಕ ಪ್ರೌಢಶಾಲೆಗಳನ್ನು ಆರಂಭ ಮಾಡಲಾಗುವುದು. ಶಾಲಾ ಕಾಲೇಜು ಆರಂಭಿಸುವ ಕುರಿತು ಸರ್ಕಾರಕ್ಕೆ ಆತುರ ಇಲ್ಲ ಎಂದು  ಸಚಿವ ಸುಧಾಕರ್ ತಿಳಿಸಿದರು.

Key words: Talk about -school-college start –after-vaccination-Minister -Dr. K. Sudhakar.