ಎಸ್ಮಾ ಜಾರಿ ಮಾಡುವ ಬಗ್ಗೆ ಚರ್ಚೆ: ಮುಷ್ಕರ ಬಿಟ್ಟು ಮಾತುಕತೆಗೆ ಬನ್ನಿ-ಸಾರಿಗೆ ನೌಕರರಿಗೆ ಸಿಎಂ ಬಿಎಸ್ ವೈ ಮನವಿ…

Promotion

ಬೆಳಗಾವಿ,ಏಪ್ರಿಲ್,7,2021(www.justkannada.in):  ಸಾರಿಗೆ ನೌಕರರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಎಸ್ಮಾ ಜಾರಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸಾರಿಗೆ ನೌಕರರು  ಮುಷ್ಕರ ಕೈಬಿಟ್ಟು ಮಾತುಕತೆಗೆ ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.Illegally,Sand,carrying,Truck,Seized,arrest,driver

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಎಸ್ಮಾ ಜಾರಿ ಬಗ್ಗೆ ಚರ್ಚಿಸಲಾಗುತ್ತಿದೆ. ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ.  ಮುಷ್ಕರವನ್ನ ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ.  ಸಾರಿಗೆ ನೌಕರರು ಮುಷ್ಕರ ಕೈ ಬಿಟ್ಟು ಮಾತುಕತೆಗೆ ಬನ್ನಿ ಯಾರ ಜತೆಯಾದರೂ ಸರಿ ಮಾತುಕತೆಗೆ ಸಿದ್ದ ಎಂದು ಹೇಳಿದರು.Talk – enforcing- Esma-transport employees-strike-CM bs Yeddyurappa

ಹಾಗೆಯೇ ಖಾಸಗಿ ಬಸ್ ನವರು ದುಬಾರಿ ಹಣ ವಸೂಲಿ ಮಾಡಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

Key words: Talk – enforcing- Esma-transport employees-strike-CM bs Yeddyurappa