ತವರು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ

Promotion

ಚೆನ್ನೈ, ಮೇ 02, 2021 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ , ಡಿಎಂಕೆ 94 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ತವರು ಕ್ಷೇತ್ರ ಸೇಲಂ ಜಿಲ್ಲೆಯ ಎಡಪ್ಪಡಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಇಲ್ಲಿನ ಕೊಲತೂರ್ ಕ್ಷೇತ್ರದಲ್ಲಿ ಮುಂದಿದ್ದಾರೆ.

ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರವಾಗಿದ್ದು , ಆರಂಭಿಕ ಹಂತದಲ್ಲಿ ಯುಪಿಎ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ , ಎನ್ ಡಿಎ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.