ತಮಿಳುನಾಡು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ : ಸಚಿವ ಬಸವರಾಜ ಬೊಮ್ಮಾಯಿ ಆಕ್ರೋಶ

Promotion

ಬೆಂಗಳೂರು,ಫೆಬ್ರವರಿ,26,2021(www.justkannada.in) : ತಮಿಳುನಾಡು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಇದಕ್ಕೆ ಕರ್ನಾಟಕದ ತೀವ್ರ ವಿರೋಧ ಇದೆ. ರಾಜ್ಯದ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ನೀರಾವರಿ ಯೋಜನೆಗಳಿಗೆ ನಾವು ಒಪ್ಪೊಗೆ ನೀಡಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

jk

ಅಂತಾರಾಜ್ಯ ಜಲವಿವಾದ ಪ್ರಕರಣಗಳ ಕುರಿತು ಮಾತನಾಡಿದ ಅವರು, ಇದುವರೆಗೆ ಕಾವೇರಿ ಹೆಚ್ಚುವರಿ ನೀರು ಅಧಿಕೃತವಾಗಿ ಹಂಚಿಕೆ ಆಗಿಲ್ಲ. ಅದಕ್ಕೂ ಮುಂಚೆಯೇ ತಮಿಳುನಾಡು ಕಾವೇರಿ –ವೈಗೈ- ಗುಂಡಾರ್ ಲಿಂಕ್ ಯೋಜನೆಗೆ ಅಡಿಗಲ್ಲು ಹಾಕಿದೆ ಎಂದು ಕಿಡಿಕಾರಿದರು.

ಇದರೊಂದಿಗೆ ೪೫ ಟಿಎಂಸಿ ನೀರು ಬಳಕೆಗೆ ತಮಿಳುನಾಡು ಮುಂದಾಗಿರೋದು ಖಂಡನೀಯ. ಇದನ್ನು ವಿರೋಧಿಸಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಯೋಜನೆ ಅಂತರರಾಜ್ಯ ನದಿ ನೀರು ಕಾಯಿದೆಗೂ ವಿರುದ್ಧವಾಗಿದೆ ಎಂದಿದ್ದಾರೆ.

ಹೆಚ್ಚುವರಿ ನೀರು ಬಳಕೆಯನ್ನು ತಮಿಳುನಾಡು ಸ್ವೇಚ್ಛಾಚಾರ ಅಂತ ಭಾವಿಸಿದೆ. ಇದಕ್ಕೆ ನಾವು ಅವಕಾಶ ನೀಡಲ್ಲ. ತಮಿಳುನಾಡಿಗೆ ಬಸವರಾಜ ಬೊಮ್ಮಾಯಿ ಖಡಕ್ ಸಂದೇಶ. ಕಾನೂನಿಗೆ ಸಂಪೂರ್ಣ ವಿರುದ್ಧವಾಗಿ ಈ ಯೋಜನೆ ಜಾರಿಯಾಗುತ್ತಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ರಾಜ್ಯದ ನೀರಾವರಿ ಯೋಜನೆ ಗಳಿಗೆ ತಮಿಳುನಾಡು ವಿರೋಧ ಮಾಡುತ್ತ ಬಂದಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

Tamil Nadu,state,best,interest,contrary,Irrigation,projects,undertaken,Minister,Basavaraja Bommai

ಈ ಯೋಜನೆಯ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ. ಅಂತಿಮ ನಿರ್ಧಾರ ಆಗೋವರೆಗೆ ಹೆಚ್ಚುವರಿ ನೀರು ಬಳಕೆಗೆ ಅವಕಾಶ ನೀಡದಂತೆ ನಮ್ಮ ವಾದ ಮಂಡಿಸುತ್ತೇವೆ ಎಂದು ತಿಳಿಸಿದರು.

key words : Tamil Nadu-state-best-interest-contrary-Irrigation-projects-undertaken-Minister-Basavaraja Bommai