ಅಧಿಕಾರಕ್ಕಾಗಿ ಪಕ್ಷಕ್ಕೆ ಮೋಸ ಮಾಡಿದ ಪ್ರತಾಪ್ ಗೌಡ ಪಾಟೀಲ್ ಗೆ ತಕ್ಕ ಪಾಠ ಕಲಿಸುತ್ತೇವೆ- ಆರ್.ಧೃವನಾರಾಯಣ್

teach -lesson - Pratap Gowda Patil-cheated –KPCC-R. Dhruvanarayan 
Promotion

ಮಸ್ಕಿ,ಮಾರ್ಚ್,27,2021(www.justkannada.in): ಅಧಿಕಾರಕ್ಕಾಗಿ ಪಕ್ಷಕ್ಕೆ ಮೋಸ ಮಾಡಿದ ಪ್ರತಾಪ್ ಗೌಡ ಪಾಟೀಲ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಹೇಳಿದರು.jk

ಮಸ್ಕಿ ವಿಧಾನಸಭೆ ಉಪಚುನಾವಣೆ ಕಣ ರಂಗೇರಿದ್ದು ಈ ನಡುವೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ , ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಪ್ರತಾಪಗೌಡ ಪಾಟೀಲ ಕ್ಷೇತ್ರಕ್ಕೆ ಏನು ಮಾಡಿದ್ದಾರೆ. ಅಧಿಕಾರಕ್ಕಾಗಿ ಪಕ್ಷಕ್ಕೆ ಮೋಸ ಮಾಡಿದ ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಹೇಳಿದರು.teach -lesson - Pratap Gowda Patil-cheated –KPCC-R. Dhruvanarayan 

ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ತುರ್ವಿಹಾಳ ಮಾ.29ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸುವರು. ಅಂದು ಮಧ್ಯಾಹ್ನ ಸಾರ್ವಜನಿಕ ಸಭೆ  ನಡೆಯಲಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸುವುದು ಖಚಿತ ಎಂದರು.

Key words: teach -lesson – Pratap Gowda Patil-cheated –KPCC-R. Dhruvanarayan