ಶೀಘ್ರದಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ- ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ.

Promotion

ಕಾರವಾರ,ಮಾರ್ಚ್,12,2022(www.justkannada.in):   ಶೀಘ್ರದಲ್ಲಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಕಾರವಾರದಲ್ಲಿ  ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿಸಿ ನಾಗೇಶ್,  ಸುಮಾರು 15 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಶಿಕ್ಷಕರ ನೇಮಕಾತಿಯ ಎಲ್ಲಾ ಹಂತದ ಸಿದ್ಧತೆ ಪೂರ್ಣಗೊಂಡಿದೆ.  ಶೀಘ್ರದಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಇನ್ನು ಕೋರ್ಟ್ ಆದೇಶದಂತೆ ಹಿಜಾಬ್ ಗೆ ಅವಕಾಶ  ನೀಡಿಲ್ಲ. ಪರೀಕ್ಷೆಗೆ ಗೈರಾದವರಿಗೆ ಮತ್ತೆ ಅವಕಾಶ ನೀಡಲ್ಲ.  ಹಿಜಾಬ್ ಗೂ ಪರೀಕ್ಷೆಗೂ ಯಾವುದೇ ಸಂಬಂಧ ಇಲ್ಲ. ಪರೀಕ್ಷೆಗೆ ಸರ್ಕಾರದ ನಿಯಮ ಪಾಲಿಸಬೇಕು  ಎಂದು ಸಚಿವ ಬಿಸಿ ನಾಗೇಶ್ ತಿಳಿಸಿದರು.

Key words: Teacher-recruitment -Minister -BC nagesh.