ದೇಗುಲ ತೆರವು ಪ್ರಕರಣ: ಸಂಸದರಿಗೆ ಕಪ್ಪುಪಟ್ಟಿ ಪ್ರದರ್ಶಿಸಿ ಕಾರಿಗೆ ಮುತ್ತಿಗೆ ಹಾಕಲು ಹಿಂದೂಪರ ಸಂಘಟನೆಗಳಿಂದ ಯತ್ನ.

kannada t-shirts

ಚಿಕ್ಕಮಗಳೂರು,ಸೆಪ್ಟಂಬರ್,16,2021(www.justkannada.in): ಮೈಸೂರಿನ ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಾಲಯ ತೆರವುಗೊಳಿಸಿರುವುದನ್ನ ಖಂಡಿಸಿ ಇಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ಸಂಸದರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆಯಿತು.

ಮೂಡಿಗೆರೆ ಬಸ್ ನಿಲ್ದಾಣದ ಬಳಿ ಸಂಸದರಾದ ಪ್ರತಾಪ್ ಸಿಂಹ ಮತ್ತು ತೇಜಸ್ವಿ ಸೂರ್ಯ ಅವರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ಮುತ್ತಿಗೆ ಹಾಕಲು ಯತ್ನಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ  ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಈ ನಡುವೆ ದೇಗುಲ ತೆರವು ವಿರೋಧಿಸಿ ಇಂದು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿತ್ತು. ಚಿಕ್ಕಮಗಳೂರಿನಲ್ಲೂ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: temple- clearance -Hindu organizations – MPs –car-chikkamagalore

website developers in mysore