ದೇವಸ್ಥಾನ ಧ್ವಂಸ ಘಟನೆಗೆ ವಿಹಿಂಪ, ಬಜರಂಗದಳ ಖಂಡನೆ: ಸೆ.16 ರಂದು ಕರಾವಳಿಯಾದ್ಯಂತ ಪ್ರತಿಭಟನೆಗೆ ಕರೆ.

kannada t-shirts

ಮಂಗಳೂರು, ಸೆ.15,2021(www.justkannada.in): ಮೈಸೂರಿನ ಪುರಾತನ ದೇವಸ್ಥಾನ ಧ್ವಂಸ ಮತ್ತು ರಾಜ್ಯದಾದ್ಯಂತ  ದೇವಸ್ಥಾನಗಳನ್ನು ತೆರವುಗೊಳಿಸುವ ರಾಜ್ಯ ಸರಕಾರದ ನಡೆಯನ್ನು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಖಂಡಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ  ಜಿಲ್ಲೆಯ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸೆ.16 ರಂದು ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ‌

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ  ಆದಿಶಕ್ತಿ ಶ್ರೀ ಮಹದೇವಮ್ಮ ಭೈರವೇಶ್ವರ ಪುರಾತನ ದೇವಸ್ಥಾನವನ್ನು ಬಲವಂತದಿಂದ ಒಡೆದು ಹಾಕಿರುವ ಕೃತ್ಯವನ್ನು ಹಾಗೂ ರಾಜ್ಯದಾದ್ಯಂತ ದೇವಸ್ಥಾನಗಳನ್ನು ತೆರವುಗೊಳಿಸುವ ಈ ನಡೆಯನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ತೀವ್ರವಾಗಿ ಖಂಡಿಸುತ್ತದೆ.  ತಕ್ಷಣ ಸರಕಾರ  ದೇವಸ್ಥಾನಗಳನ್ನು ತೆರವುಗೊಳಿಸುವ  ನಿರ್ಧಾರದಿಂದ ಹಿಂದೆ ಸರಿಯಬೇಕು. ಒಡೆದು ಹಾಕಿರುವ ದೇವಸ್ಥಾನವನ್ನು ಪುನಃ ರ್ನಿರ್ಮಾಣ ಮಾಡಬೇಕು. ಅಲ್ಲದೆ ಈ ಕೃತ್ಯವನ್ನು ಮಾಡಿರುವ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ನಂಜನಗೂಡು ತಾಲ್ಲೂಕಿನ ತಹಸಿಲ್ದಾರರನ್ನು ಅಮಾನತುಗೊಳಿಸಬೇಕು ಎಂದು ವಿಹಿಂಪ ಆಗ್ರಹಿಸಿದೆ.

ಈ ಬಗ್ಗೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಜಿಲ್ಲಾ  ಕೇಂದ್ರಗಳಲ್ಲಿ ಸೆಪ್ಟೆಂಬರ್ 16 ರ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: temple- wreck –protest- sep.16-wishwa Hindu Parishad

website developers in mysore