ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ: ಇಬ್ಬರು ಸಾವು…

ಉಡುಪಿ,ಜೂ,18,2020(www.justkannada.in):  ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಟೆಂಪೊ ಡಿಕ್ಕಿ ಹೊಡೆದು ಟೆಂಪೊ ಚಾಲಕ ಮತ್ತು ಕ್ಲೀನರ್ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.Tempo- collides - driver -Two -deaths.

ಅಂಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದೆ.  ದಿನೇಶ್(35) ಮಂಜು(30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಇಬ್ಬರು ಅಪಘಾತ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಈ ಕುರಿತು ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Tempo- collides – driver -Two -deaths.