ಮಾಜಿ ಸಚಿವ ಡಿಕೆ ಶಿವಕುಮಾರ್ ಪತ್ನಿ ಮತ್ತು ತಾಯಿಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…

ನವದೆಹಲಿ,ನ,7,2019(www.justkannada.in): ನಾಳೆ ಇಡಿ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಪತ್ನಿ ಉಷಾ ಮತ್ತು ತಾಯಿ ಗೌರಮ್ಮಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಾಳೆ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ನವದೆಹಲಿ ಹೈಕೋರ್ಟ್ ಹೇಳಿದೆ.

ಇಡಿ ಸಮನ್ಸ್ ಪ್ರಶ್ನಿಸಿ ಹಾಗೂ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಕೋರಿ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನವದೆಹಲಿ ಹೈಕೋರ್ಟ್ ನಲ್ಲಿ ನಡೆಯಿತು. ಡಿಕೆಶಿ ತಾಯಿ ಗೌರಮ್ಮ ಪರ ವಾದ ಮಂಡಿಸಿದ ವಕೀಲರು,  ದೆಹಲಿಗೆ ಬಂದು ವಿಚಾರಣೆ ಎದುರಿಸಲು ಸಮರ್ಥರಿಲ್ಲ ಎಂದು ವಾದ ಮಂಡಿಸಿದರು.

ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರು ನಾಳೆ ಇಡಿ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದು ಹೇಳಿ ನವದೆಹಲಿ ಹೈಕೋರ್ಟ್ ವಿಚಾರಣೆಯನ್ನ ನವೆಂಬರ್ 15ಕ್ಕೆ ಮುಂದೂಡಿತು. ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು.

Key words: Temporary relief –DK Shivakumar- wife – mother -petition -hearing -adjourned