ಟೆಸ್ಟ್ ಚಾಂಪಿಯನ್’ಶಿಪ್ ಫೈನಲ್: ನ್ಯೂಜಿಲೆಂಡ್ ತಂಡ ಪ್ರಕಟ

Promotion

ಬೆಂಗಳೂರು, ಜೂನ್ 15, 2021 (www.justkannada.in): ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕಾಗಿ ನ್ಯೂಜಿಲೆಂಡ್‌ ಕ್ರಿಕೆಟ್ ಬೋರ್ಡ್ 15 ಆಟಗಾರರ ತಂಡ ಪ್ರಕಟಿಸಿದೆ.

ಗಾಯಕ್ಕೀಡಾಗಿದ್ದ ನಾಯಕ ಕೇನ್ ವಿಲಿಯಮ್ಸನ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೆಂಟ್‌ ಬೌಲ್ಟ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ರಾಸ್ ಟೇಲರ್ ಸೇರಿದಂತೆ ಬಲಿಷ್ಠ ಆಟಗಾರರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಜೂನ್ 18-22ರ ವರೆಗೆ ಸೌತಾಂಪ್ಟನ್‌ನ ಏಜಸ್ ಬೌಲ್ ಸ್ಟೇಡಿಯಂನಲ್ಲಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯ ನಡೆಯಲಿದೆ. ಕುತೂಹಲಕಾರಿ ಕದನಕ್ಕೆ ಎರಡೂ ತಂಡಗಳು ಸಜ್ಜಾಗಿವೆ.

ನ್ಯೂಜಿಲೆಂಡ್ ತಂಡ

ಕೇನ್ ವಿಲಿಯಮ್ಸನ್ (ಸಿ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ಬಿಜೆ ವಾಟ್ಲಿಂಗ್, ವಿಲ್ ಯಂಗ್.