ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಗೀತಾ ಶಿವರಾಜ್ ​​ಕುಮಾರ್​​​​ ಸಮರ್ಥನೆ.

Promotion

ಮೈಸೂರು,ಜೂನ್,17,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಪಠ್ಯ ಪರಿಷ್ಕರಣೆ ಮೂಲಕ ಹಿಂದಿನ ಬಿಜೆಪಿ ಸರ್ಕಾರ ಅಳವಡಿಸಿದ್ಧ ಕೆಲ ವಿಷಯಗಳನ್ನ ತೆಗೆದು ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೀತಾ ಶಿವರಾಜ್ ​​ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನ ಕುಕ್ಕರಹಳ್ಳಿಯಲ್ಲಿ ಮಾತನಾಡಿದ ಗೀತಾ ಶಿವರಾಜ್​​ಕುಮಾರ್, ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ.

ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.

Key words: text book- revision – benefit – children- Geetha Shivraj Kumar-mysore