ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಮಠಾಧೀಶರು ಪತ್ರ ಬರೆಯುತ್ತಿದ್ದಾರೆಂದರೇ ಗಂಭೀರವಾಗಿ ಪರಿಗಣಿಸಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ.

kannada t-shirts

ಹುಬ್ಬಳ್ಳಿ,ಜೂನ್,1 ,2022(www.justkannada.in): ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತು ಸರ್ಕಾರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.

ಪಠ್ಯ ಪುಸ್ತಕದಲ್ಲಿ ಆಗುತ್ತಿರುವ ಲೋಪದೋಷಗಳನ್ನ ಸರಿಪಡಿಸಿ. ಮಠಾಧೀಶರು ಪತ್ರ ಬರೆಯುತ್ತಿದ್ದಾರೆಂದರೇ ಇದನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಲಹೆ ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ  4 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ.  ಬೆಳಗಾವಿ ಮೈಸೂರಿನಲ್ಲಿ ನಮ್ಮ ಪಕ್ಷದ  ಪರ ಅಲೆ ಇದೆ. ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಗೊಂದಲ ನಿರ್ಮಾಣ ಮಾಡಲು ಯತ್ನಿಸುತ್ತಿದೆ. ಕಡಿಮೆ ಮತಗಳಿದ್ದರೂ 2ನೇ ಅಭ್ಯರ್ಥಿಗಳನ್ನ ಹಾಕಿದ್ದಾರೆ.  ಡಿಕೆ ಶಿವಕುಮಾರ್- ಸಿದ್ದರಾಮಯ್ಯ ನಡುವಿನ ಒಳಜಗಳ ಕಾರಣ 2ನೇ ಅಭ್ಯರ್ಥಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಕಾಲಾನುಕ್ರಮೇಣ ಸಂಪುಟ ವಿಸ್ತರಣೆ ಆಗಬೇಕು. ಅದು ಸಿಎಂ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು. ಆದರೆ ಯಾಕೆ ತಡವಾಗುತ್ತಿದೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಬೇಕು ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Textbook-Revision – Take -seriously- advised – former CM -Jagdish Shettar.

website developers in mysore