ಯುಗಾದಿ ದಿನವಾದ ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Promotion

ಬೆಂಗಳೂರು, ಮಾರ್ಚ್ 22, 2023 (www.justkannada.in): ಯುಗಾದಿ ಹಬ್ಬದ ದಿನವಾದ ಇಂದು ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಆಗಲಿದೆ.

ಯುಗಾದಿಯಂದೇ ಟಿಕೆಟ್ ಘೋಷಣೆ ಆಗಲಿರುವುದರಿಂದ ಯಾರಿಗೆ ಕಹಿ ಯಾರಿಗೆ ಸಿಹಿ ಎಂಬ ಕುತೂಹಲ ಕೆರಳಿಸಿದೆ.

224 ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 125 ಹೆಸರುಗಳನ್ನು ಫೈನಲ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದ್ದು, ಅದರಲ್ಲೂ ಸಹ ನಾಲ್ಕೈದು ಹಾಲಿ ಶಾಸಕರಿಗೆ ಕೈ ತಪ್ಪು ಸಾಧ್ಯತೆ ಇದೆ ಎನ್ನಲಾಗಿದೆ.

ಇದರ ಜತೆಗೆ ಗೊಂದಲ ಇಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.