ಪಿಂಕ್ ಬಾಲ್ ಟೆಸ್ಟ್: ಶತಕ ಬಾರಿಸಿ ದಾಖಲೆ ಬರೆದ ಸ್ಮೃತಿ ಮಂಧಾನ

ಮೈಸೂರು, ಅಕ್ಟೋಬರ್ 1, 2021 (www.justkannada.in): ಆಸ್ಟ್ರೇಲಿಯಾದ ಮಟ್ರಿಕಾನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳೆಯರ ವಿರುದ್ಧದ ಏಕೈಕ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್‌ ನಲ್ಲಿ ಸ್ಮೃತಿ ಮಂಧಾನ ಭರ್ಜರಿ ಶತಕ ಗಳಿಸಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಭಾರತ ಭರ್ಜರಿ ಆರಂಭ ಪಡೆದುಕೊಂಡಿತು. ಓಪನರ್​ಗಳಾದ ಸ್ಮೃತಿ ಮಂಧಾನ ಮತ್ತು ಶೆಫಾಲಿ ವರ್ಮಾ ಮೊದಲ ವಿಕೆಟ್​ಗೆ 93 ರನ್​ಗಳ ಜೊತೆಯಾಟ ಆಡಿದರು.

ಮೊದಲ ದಿನದಾಟ ಮಳೆಯಿಂದಾಗಿ ಸಂಪೂರ್ಣ ಆಡಲು ಸಾಧ್ಯವಾಗಲಿಲ್ಲ. ಈ ಮೂಲಕ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ಒಂದು ವಿಕೆಟ್​ಗೆ 132 ರನ್ ಗಳಿಸಿತ್ತು. 2ನೇ ದಿನ ಭಾರತೀಯ ವನಿತೆಯರು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ 171 ಎಸೆತಗಳಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ತಲುಪಲು ಮಂಧಾನಾ ಕೆಲವು ಸುಂದರವಾದ ಹೊಡೆತಗಳೊಂದಿಗೆ ಗಮನ ಸೆಳೆದರು. ಪಿಂಕ್ ಬಾಲ್ ಟೆಸ್ಟ್ ನಲ್ಲಿ ಭಾರತ ತಂಡದ ಸ್ಮೃತಿ ಮಂಧಾನ ಶತಕ ಭಾರಿಸುವ ಮೂಲಕ ತಮ್ಮ ಟೆಸ್ಟ್ ನ ಮೊದಲ ಶತಕ ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ಆಸ್ಟ್ರೇಲಿಯಾದ ನೆಲದಲ್ಲಿ ಭಾರತೀಯ ಮಹಿಳೆ ಮಾಡಿದ ಮೊದಲ ಶತಕವಾಗಿದೆ.

key words: The Pink Ball Test: Smriti Mandhana score century