ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವು…

Promotion

ಮೈಸೂರು,ಜೂ,7,2019(www.justkannada.in):  ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಐಟಿಸಿ ಕಾರ್ಖಾನ ಕಾರ್ಮಿಕ ಮಹದೇವು(35) ಮೃತಪಟ್ಟವರು. ಮೃತರು ನಂಜನಗೂಡು ತಾಲೂಕಿನ ಕೆಂಪಿ ಸಿದ್ದನಹುಂಡಿ ಗ್ರಾಮದ ನಿವಾಸಿಯಾಗಿದ್ದು ಇಂದು ಬೆಳಗಿನ ಪಾಳಿಯಲ್ಲಿ ಕೆಲಸ ನಿರ್ವಹಿಸುದ್ದಾಗ ಆಯ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.

ಎರಡನೆಯ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು ಮೃತ ವ್ಯಕ್ತಿಯ ಶವವನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮತ್ತು ಇತರೆ ಮುಖಂಡರ ನೇತೃತ್ವದಲ್ಲಿ ಹೆಚ್ಚಿನ ಪರಿಹಾರಕ್ಕಾಗಿ ಒತ್ತಾಯಿಸಿ ಕಾರ್ಖಾನೆ ಮಾಲೀಕರ ಜತೆ ಮಾತುಕತೆ ನಡೆಸಲಾಗಿದೆ. ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಮೃತ ಕಾರ್ಮಿಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Key words: The worker died when he was working.

#mysore #Labor #death #working