ಮೊದಲು ನಮ್ಮ ರಾಜ್ಯದ ಜನರ ಬಗ್ಗೆ ಯೋಚಿಸಿ- ಮಹಾರಾಷ್ಟ್ರಕ್ಕೆ ನೀರು ಹರಿಸುವ ಹೇಳಿಕೆ ನೀಡಿದ ಸಿಎಂ ಬಿಎಸ್ ವೈ ತಿರುಗೇಟು ನೀಡಿದ ಮಾಜಿ ಸಿಎಂ ಹೆಚ್.ಡಿಕೆ…

Promotion

ಬೆಂಗಳೂರು,ಅ,17,2019(www.justkannada.in):  ಮಹಾರಾಷ್ಟ್ರಕ್ಕೆ ನೀರು ಬಿಡುವುದಾಗಿ ಅಲ್ಲಿನ ಜನರಿಗೆ ಚುನಾವಣಾ ಪ್ರಚಾರದ ವೇಳೆ ಭರವಸೆ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರಕ್ಕೆ ನೀರು ಬಿಡುತ್ತೇನೆ ಎಂದಿರುವ ಸಿಎಂ ಬಿಎಸ್ ಯಡಿಯೂರಪ್ಪಗೆ ನಾಚಿಕೆಯಾಗಬೇಕು. ಮೊದಲು ನಮ್ಮ ರಾಜ್ಯದ ಜನರ ಬಗ್ಗೆ ಯೋಚನೆ ಮಾಡಲಿ ಎಂದು ಸಿಎಂ ಬಿಎಸ್ ವೈ ಗೆ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.

ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಈ ಹಿಂದೆ ನಮ್ಮ ಅವಧಿಯಲ್ಲಿ  ಡಿ.ಕೆ ಶಿವಕುಮಾರ್ ಮಹಾರಾಷ್ಟ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ನೀರು ಹರಿಸಲಿಲ್ಲ. ನಮ್ಮ ರಾಜ್ಯಕ್ಕೆ ಮೋಸ ಮಾಡಿದ ಮಹಾರಾಷ್ಟ್ರಕ್ಕೆ ನೀರು ಹರಿಸಬೇಡಿ ಎಂದು ಸಲಹೆ ನೀಡಿದರು.

ಇನ್ನು ತಮ್ಮ ವಿರುದ್ದ ಬಸವರಾಜ ಹೊರಟ್ಟಿ ಸೇರಿ ಹಲವು ಮುಖಂಡರು ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ,  ನನ್ನ ಮೇಲೆ ವಿಶ್ವಾಸವಿಲ್ಲದಿದ್ದರೇ ಪಕ್ಷದ ನಾಯಕತ್ವ ತ್ಯಜಿಸಲು ಸಿದ್ಧನಿದ್ದೇನೆ. ಅವರಿಗೆ ಬೇಕಾದ ನಾಯಕರನ್ನ ಆಯ್ಕೆ ಮಾಡಿಕೊಳ್ಳಲಿ.ಎಲ್ಲರ ಜತೆ ನಾನು ಗೌರವಯುತವಾಗಿ ನಡೆದುಕೊಂಡಿದ್ದೇನೆ. ನಾನು ಯಾರಿಂದಲೂ ಸರ್ಟಿಫಿಕೆಟ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು.

Key words: Think – our state- people – first – former CM HD kumaraswamy- CM BSY