ದಸರಾ ಬಳಿಕವೇ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

ಬೆಂಗಳೂರು,ಸೆಪ್ಟಂಬರ್,29,2021(www.justkannada.in):  ದಸರಾ ಹಬ್ಬದ  ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 1 ರಿಂದ 5ನೇ ತರಗತಿ ಆರಂಭ ಸಂಬಂಧ ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ  1ರಿಂದ 5ನೇ ತರಗತಿ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 1, 2ನೇ ತರಗತಿ ಆರಂಭಿಸಲು ಅನುಮತಿ ನೀಡದಿದ್ದರೂ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.

1 ರಿಂದ ಐದನೇ ತರಗತಿವರೆಗೂ ಶಾಲೆ  ತೆರೆಯಲು ನಾನು ಮತ್ತು ಸಿಎಂ ಉತ್ಸಾಹದಲ್ಲಿ ಇದ್ದೇವೆ. ಆದರೆ, ತಜ್ಞರ ಜತೆ ಚರ್ಚೆ ಮಾಡಿದ ಬಳಿಕ ಈ ಬಗ್ಗೆ ನಿರ್ಧಾರ ಮಾಡುತ್ತೇವೆ. ಶಾಲೆ ತೆರೆಯಲು ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಒಪ್ಪಿಗೆ ಕಡ್ಡಾಯವಾಗಿ ಬೇಕು. ಶಿಕ್ಷಣ ಎಷ್ಟು ಮುಖ್ಯವೋ ಮಕ್ಕಳ ಆರೋಗ್ಯ ಮತ್ತು ಜೀವ ಸಹ ಅಷ್ಟೇ ಮುಖ್ಯವಾಗಿದೆ ಎಂದು ಬಿಸಿ ನಾಗೇಶ್ ತಿಳಿಸಿದರು.

Key words: Thinking- about -starting -1st to 5th class- after-dasara- Minister- BC Nagesh