ಮೂರು ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ಮೋದಿ ನಿರ್ಧಾರ ಸ್ವಾಗತಿಸಿದ ರೈತಪರ ಸಂಘಟನೆಗಳು.

Promotion

ನವದೆಹಲಿ,ನವೆಂಬರ್,19,2021(www.justkannada.in): ಕಳೆದ ಒಂದು ವರ್ಷದಿಂದ ಬೀದಿಗಿಳಿದು ಹೋರಾಟ ನಡೆಸಿದ ರೈತರ ಆಕ್ರೋಶಕ್ಕೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದಿದೆ.

ಇಂದು  ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ವೇಳೆ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ  ತಿಳಿಸಿದ್ದಾರೆ.

ಅಲ್ಲದೆ ಪ್ರತಿಭಟನೆ ಕೈಬಿಟ್ಟು ರೈತರು ಮನೆಗೆ ತೆರಳುವಂತೆ ಮನವಿ ಮಾಡಿದ ಪ್ರಧಾನಿ ಮೋದಿ, ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ನಿರ್ಧಾರವನ್ನ ಸಂಯುಕ್ತ ಕಿಸಾನ್ ಮೋರ್ಚಾ,ಆಲ್ ಇಂಡಿಯಾ ಕಿಸಾನ್ ಸಭಾ ಸ್ವಾಗತಿಸಿವೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಡೆದಿದ್ದಕ್ಕೆ ಧನ್ಯವಾದಗಳು ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ. ಹಾಗೆಯೇ ಇದು ದೇಶದ ಎಲ್ಲಾ ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಈ ಹೋರಾಟದಲ್ಲಿ 700 ಜನ ಪ್ರಾಣ ಕಳೆದುಕೊಂಡಿದ್ದರು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ತಿಳಿಸಿದೆ.

Key words: Three -Agricultural Amendment Acts-  Farmer- organizations- welcomed -PM Modi’s -decision.

ENGLISH SUMMARY…

Centre withdraws three agriculture amendments: Pro-farmer organizations welcome PM Modi’s decision
New Delhi, November 19, 2021 (www.justkannada.in): The Union Government has at last bent down in front of the farmers who are protesting for the last year demanding the Union government to withdraw its amended agriculture policy.
Addressing the nation today Prime Minister Narendra Modi announced that the three amended agriculture policies would be withdrawn.
He also urged the protesting farmers to withdraw their protest and return home. “We had implemented the three new amendments in our attempt to improve the economical and social condition of the farmers. It was made keeping in mind the interests of the marginal farmers. All three laws were completely beneficial for the farmers. We had implemented it keeping in mind the benefit of only the farmers. We also tried a lot to create awareness among the farmers about this. But a few farmers though their suggestions were agreed, have continued to protest. As a result of the constant fight from the farmers, we have decided to withdraw the three amendments,” he said.
The Samyukta Kisan Morcha, All India Kisan Sabha has welcomed Prime Minister Modi’s decision and has thanked him for withdrawing them. The All India Kisan Sabha has informed that it is a victory for the constant fight of the farmers, and also mentioned 700 farmers had lost their lives.
Keywords: Prime Minister Narendra Modi/ Union government/ three agri amended policies withdrawn