ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

Promotion

ಹಾಸನ,ಫೆಬ್ರವರಿ,24,2022(www.justkannada.in): ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ ಈ ಘಟನೆ ನಡೆದಿದೆ. ತಂದೆ ಸತ್ಯಪ್ರಕಾಶ್(54), ತಾಯಿ ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಆತ್ಮಹತ್ಯೆಗೆ ಶರಣಾದವರು.  ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಕುರಿತು ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three -commit suicide – poison.