ಸಮ್ಮಿಶ್ರ ಸರ್ಕಾರದ ಮತ್ತೆರೆಡು ವಿಕೆಟ್ ಪತನ:  ಇಬ್ಬರು ಕೈ ಶಾಸಕರು ರಾಜೀನಾಮೆ…

Promotion

ಬೆಂಗಳೂರು,ಜು,10,2019(www.justkannada.in):  ಸಮ್ಮಿಶ್ರ ಸರ್ಕಾರದ  ಮತ್ತೆ   ಎರಡು ವಿಕೆಟ್ ಗಳು ಪತನವಾಗಿದ್ದು,   ಇಬ್ಬರು ಕಾಂಗ್ರೆಸ್ ಶಾಸಕರು  ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಹೊಸಕೋಟೆಯ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವ ಕಾಂಗ್ರೆಸ್ ಶಾಸಕರ ಪಟ್ಟಿ ಮುಂದುವರೆದಿದೆ.

ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು, ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇನ್ನು ರಾಜ್ಯ ಸರ್ಕಾರದ ಮುಖ್ಯ ಸಚೇತಕರಾಗಿರುವ ಗಣೇಶ್ ಹುಕ್ಕೇರಿ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

Key words: Three -Congress -MLA- resign.