ಜೂನ್ 19ರಿಂದ ಮೈಸೂರು ಅರಮನೆಗೆ ಮೂರು ದಿನ ಪ್ರವೇಶ ನಿರ್ಬಂಧ.

Promotion

ಮೈಸೂರು,ಜೂನ್,18,2022(www.justkannada.in): ಜೂನ್ 19 ರಿಂದ ಮೂರು ದಿನಗಳ ಕಾಲ ಮೈಸೂರು ಅರಮನೆಗೆ ಮೂರು ದಿನ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಜೂನ್ 21ರಂದು ನಡೆಯುವ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಅರಮನೆಯಲ್ಲಿ ಕಾಮಗಾರಿ ಹಿನ್ನೆಲೆ ಮೂರು ದಿನಗಳ ಕಾಲ ಪ್ರವೇಶ ನಿರ್ಬಂಧಿಸಿ ಅರಮನೆ ಆಡಳಿತ ಮಂಡಳಿ  ಪ್ರಕಟಣೆ ಹೊರಡಿಸಿದೆ.

ಜೂ 21ರ ಮಧ್ಯಾಹ್ನ 12 ಗಂಟೆಯವರೆಗೂ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ ಜೂನ್ 22ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

Key words: Three day -restriction- Mysore Palace – June 19