ಕಲುಷಿತ ನೀರು ಕುಡಿದು ಮೂವರು ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಜೂನ್,6,2022(www.justkannada.in):  ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿದ  ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ  5 ಲಕ್ಷ ರೂ ಪರಿಹಾರ  ನೀಡುತ್ತೇವೆ. ವಾರ್ಡ್ ಗಳಲ್ಲಿ ನೀರು ಪರಿಶೀಲನೆಗೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಸಂಪೂರ್ಣ ಟೆಕ್ನಿಕಲ್ ವರದಿ ತರಿಸಿಕೊಳ್ಳುತ್ತೇವೆ. ಡಿವೈಎಸ್ ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಧಿಕಾರಿಗಳ ತಪ್ಪಿದ್ದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಯಚೂರು ನಗರದಲ್ಲಿ ಕಲುಷಿತ ನೀರು ಸೇವಿಸಿ ಮಲ್ಲಮ್ಮ, ಅಬ್ದುಲ್, ನೂರ್ ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷ್ಯದ ವಿರುದ್ಧ ನಾಗರಿಕ ಹೋರಾಟ ವೇದಿಕೆ ರಾಯಚೂರು ಬಂದ್ ಗೆ ಕರೆ ನೀಡಿದೆ.

Key words: three-deaths-contaminated-water-5lakhs-CM Bommai