ಅನರ್ಹಗೊಂಡಿದ್ದ ಮೂವರು ಜೆಡಿಎಸ್ ಶಾಸಕರನ್ನ ಪಕ್ಷದಿಂದ ಉಚ್ಛಾಟನೆ ಮಾಡಿದ ಹೆಚ್.ಡಿ ದೇವೇಗೌಡರು..

ಬೆಂಗಳೂರು,ಜು,31,2019(www.justkannada.in): ಹಿಂದಿನ ಸಮ್ಮಿಶ್ರ ಸರ್ಕಾರದ ವಿರುದ್ದ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹತೆಗೊಂಡಿರುವ ಜೆಡಿಎಸ್ ನ ಮೂವರು ಶಾಸಕರನ್ನ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ಕಾರಣ ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ  ಮೂವರು ಶಾಸಕರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ  ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಆದೇಶಿಸಿದ್ದಾರೆ. ಹುಣಸೂರು ವಿಧಾನಸಭಾ ಕ್ಷೇತ್ರದ ಅಡಗೂರು ಎಚ್ ವಿಶ್ವನಾಥ್. ಮಹಾಲಕ್ಷ್ಮೀ ಲೈ ಔಟ್ ವಿಧಾನಸಭಾ ಕ್ಷೇತ್ರದ ಕೆ ಗೋಪಾಲಯ್ಯ ಮತ್ತು ಕೆ. ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಕೆಸಿ ನಾರಾಯಣಗೌಡ ಅವರನ್ನು ಜೆಡಿಎಸ್ ನಿಂದ ಉಚ್ಚಾಟಿಸಲಾಗಿದೆ.

ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ ಎಂಬ ಕಾರಣ ನೀಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ  ಸಲ್ಲಿಸಿ ಮುಂಬೈನ ಹೋಟೇಲ್ ನಲ್ಲಿ ಈ ಮೂವರು ಜೆಡಿಎಸ್ ಶಾಸಕರು ಸೇರಿದಂತೆ 13ಮಂದಿ ಶಾಸಕರು ವಾಸ್ತವ್ಯ ಹೂಡಿದ್ದರು. ಇದರಿಂದ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗಿ ಸಿಎಂ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದರು.

ಇದೀಗ ಬಿಜೆಪಿ ಸರ್ಕಾರ ರಚನೆಯಾಗಿದ್ದು ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಈ ನಡುವೆ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದ 17 ಮಂದಿ ಶಾಸಕರನ್ನ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದರು.

 

key words: Three -JDS MLAs – Expulsion –party- hd devegowda-order