ಕಲ್ಲು ಹೊಡೆದವರು , ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ….

Promotion

ಹುಬ್ಬಳ್ಳಿ,ಸೆ,5,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಬಸ್ ಮೇಲೆ ಕಲ್ಲು  ತೂರಿದವರು ಬೆಂಕಿ ಹಚ್ಚಿದವರು ನಮ್ಮ ಕಾಂಗ್ರೆಸ್ ಕಾರ್ಯಕರ್ತರಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,   ನಮ್ಮಪ್ರತಿಭಟನೆ ವೇಳೆ ಕೆಲ ಕಿಡಿಗೇಡಿಗಳು ಸೇರಿಕೊಂಡು ಈ ರೀತಿ ಮಾಡಿದ್ದಾರೆ. ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಕೆಲಸ ಮಾಡಲ್ಲ. ಶಾಂತಿಯುತ ಪ್ರತಿಭಟನೆ ನಡೆಸಲು ನಾನು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯಾದ್ಯಂತ ನಿನ್ನೆಯಿಂದ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕೆಲ ಅಹಿತಕರ ಘಟನೆ ನಡೆದವು. ಬೆಂಗಳೂರು, ಮಂಗಳೂರಿನಲ್ಲಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದ್ದವು.

Key words: Throw – stone- not our- Congress –workers- Former CM –Siddaramaiah-hubbli