‘’ಅತಿವೃಷ್ಠಿ, ಕೊರೋನಾ, ಬರಗಾಲದ ಮಧ್ಯೆಯೂ ನನಗೊಂದು ಕನಸಿದೆ’’ : ಸಿಎಂ ಬಿ.ಎಸ್.ಯಡಿಯೂರಪ್ಪ…!

ಬೆಂಗಳೂರು,ಡಿಸೆಂಬರ್,31,2020(www.justkannada.in)  : ಅತಿವೃಷ್ಠಿ, ಕೊರೋನಾ, ಬರಗಾಲದ ಮಧ್ಯೆಯೂ ನನಗೊಂದು ಕನಸಿದೆ. ರಾಜ್ಯವನ್ನು ಅಭಿವೃದ್ಧಿಯ ಭೂಪಟದಲ್ಲಿ 1ನೇ ಸ್ಥಾನಕ್ಕೆ ಕೊಂಡೊಯ್ಯೋದು. ಆ ಕೆಲಸವನ್ನು ಮಾಡುವ ನಿಟ್ಟಿನಲ್ಲಿ ನಮ್ಮ ಸಂಪುಟದ ಸಹೋದ್ಯೋಗಿಗಳ ಜೊತೆಗೆಗೂಡಿ ಕೆಲಸ ಮಾಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.jk-logo-justkannada-mysore

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬಜೆಟ್ ನಲ್ಲಿ ನಿಗದಿ ಪಡಿಸಿದಂತ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ.60ಕ್ಕೂ ಹೆಚ್ಚು ಗೆಲುವು ಸಾಧಿಸಿದ್ದಾರೆ. ಇದಕ್ಕೆ ಬಿಜೆಪಿಯ ಸಾಮೂಹಿಕ ನಾಯಕತ್ವ ಕಾರಣ, ನಮ್ಮ ಕಾರ್ಯಕರ್ತರ ಶ್ರಮದ ಪ್ರತಿಫಲವಾಗಿದೆ. 3000 ಸಾವಿರಕ್ಕೂ ಹೆಚ್ಚು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಅತ್ಯಂತ ಸಂತಸದ ವಿಷಯವಾಗಿದೆ ಎಂದರು.

2027ರವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎನ್ನುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ರೂಪಿಸಿದೆ. ರೈತರ ಶ್ರೇಯೋಭಿವೃದ್ಧಿಗಾಗಿಯೇ ಕೃಷಿ ಮಾರುಕಟ್ಟೆ ಸುಧಾರಣೆಗಾಗಿ ಕಾಯ್ದೆಗೆ ತಿದ್ದು ಪಡಿ ತಂದಿದ್ದಾರೆ. ಈ ಮೂಲಕ ರೈತರು ಎಲ್ಲಿ ಬೇಕಾದರು ತಾವು ಬೆಳೆದಂತ ಬೆಳೆಯನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.

ರೈತರಿಗೆ ಅನುಕೂಲಕರವಾದಂತ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಆದರೆ, ಇದನ್ನು ತಪ್ಪಾಗಿ ಅರ್ಥೈಸುವ ಮೂಲಕ ರೈತರನ್ನು ದಾರಿ ತಪ್ಪಿಸುವಂತ ಕೆಲಸವನ್ನು ವಿರೋಧ ಪಕ್ಷಗಳು ಮಾಡುತ್ತಿವೆ. ಪ್ರಧಾನ ಮಂತ್ರಿ ಕಿಸನ್ ಸಮ್ಮಾನ್ ಯೋಜನೆ, ಜನ್ ಜೀವನ್ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರ ಜನರಿಗೆ ಅನುಕೂಲಕಾರಿಯಾದಂತ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಧರಣಿ ನಿರತ ರೈತರು ಪ್ರಧಾನಿಯವರ ಕಾರ್ಯಕ್ರಮಗಳನ್ನು ಅರ್ಥ ಮಾಡಿಕೊಂಡು, ಧರಣಿ ನಿಲ್ಲಿಸಿ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುವಂತೆ ಮನವಿ ಮಾಡಿದರು.Times-number-Corona-Drought-meantime-dream- CM B.S.Yeddyurappa ...!

 

ಒಂದೇ ಒಂದು ನನ್ನ ಆಸೆ. ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಭೂಪಟದಲ್ಲಿ ಕರ್ನಾಟಕವನ್ನು ಒಂದನೇ ಸ್ಥಾನಕ್ಕೆ ಕೈಗೊಂಡು ಹೋಗುವ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳು ಮಾಡುತ್ತಿದ್ದೇವೆ. ಇದರ ಮಧ್ಯೆ ಬರಗಾಲ, ಅತಿವೃಷ್ಠಿ, ಕೋವಿಡ್ ನಂತ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ಇದರ ಮಧ್ಯೆಯೂ ಬಜೆಟ್ ನಲ್ಲಿ ತಿಳಿಸಿದಂತ ಗುರಿಯನ್ನು ತಲುಪುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

key words : Times-number-Corona-Drought-meantime-dream- CM B.S.Yeddyurappa …!