ಟಿಪ್ಪು ಜಯಂತಿ ರದ್ದುಗೊಳಿಸಿ ರಾಜ್ಯ ಬಿಜೆಪಿ ಸರ್ಕಾರದಿಂದ ಆದೇಶ…

ಬೆಂಗಳೂರು,ಜು.30,2019(www.justkannada.in): ಕನ್ನಡ ಮತ್ತು ಸಂಸ್ಕೃತಿ  ಇಲಾಖೆ ವತಿಯಿಂದ ಪ್ರತಿ ವರ್ಷ ನವೆಂಬರ್ 10 ರಂದು ಆಚರಿಸಲಾಗುತ್ತಿದ್ದ ಟಿಪ್ಪು ಜಯಂತಿಯನ್ನ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಬಿಜೆಪಿ ಸರ್ಕಾರ ರದ್ದುಮಾಡಿದೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಟಿಪ್ಪು ಜಯಂತಿ ಆಚರಣೆಯನ್ನ ಜಾರಿಗೆ ತರಲಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿ ತಮ್ಮ ಸರ್ಕಾರ ಬಂದಾಗ ಟಿಪ್ಪು ಜಯಂತಿ ರದ್ದು ಮಾಡುವುದಾಗಿ ಹೇಳಿತ್ತು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು  ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಪ್ಪು ಜಯಂತಿಯನ್ನು ರದ್ದುಗೊಳಿಸಲು ತೀರ್ಮಾನಿಸಿತ್ತು. ಈ ಸಂಬಂಧ  ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು  ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಟಿಪ್ಪು ಜಯಂತಿ ಆಚರಣೆಯಿಂದ ಕೊಡಗು ಜಿಲ್ಲೆಯಲ್ಲಿ ಸಾವುನೋವುಗಳು ಸಂಭವಿಸಿದ್ದು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗುರುತ್ತದೆ. ಹಾಗೆಯೇ ಇಂದಿಗೂ  ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣವಿದ್ದು ಜನರ ನಡುವಿನ ಸಾಮರಸ್ಯ ಹದಗೆಟ್ಟಿದೆ. ಅದ್ದರಿಂದ ಟಿಪ್ಪು ಜಯಂತಿ ರದ್ದು ಮಾಡುವಂತೆ ಮನವಿ ಮಾಡಿದ್ದರು.  ಇದೀಗ ಶಾಸಕ ಕೆ.ಜಿ ಬೋಪಯ್ಯ ಮನವಿಗೆ ಸ್ಪಂದಿಸಿರುವ ಸರ್ಕಾರ  ತಕ್ಷಣದಿಂದಲೇ ಜಾರಿಗೆ ಬರುವಂತೆ ಟಿಪ್ಪು ಜಯಂತಿಯನ್ನ ರದ್ದು ಮಾಡಿ ಆದೇಶ ಹೊರಡಿಸಿದೆ.

ಟಿಪ್ಪು ಜಯಂತಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೊದಲಿಗೆ ಆಚರಣೆ ಮಾಡಲಾಯಿತು.  ನಂತರ 2016ರಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಲಾಯಿತು. ಅಂದಿನಿಂದಲೂ ಆ ಇಲಾಖೆ ಟಿಪ್ಪು ಜಯಂತಿಯನ್ನು ಆಚರಿಸಿಕೊಂಡು ಬರುತ್ತಿತ್ತು.

Key words: Tippu Jayanthi- canceled – state -BJP government