ಇಂದು ಭಾರತೀಯ ನೌಕಾಪಡೆ ದಿನಾಚರಣೆ: ವಿಶಾಖಪಟ್ಟಣದಲ್ಲಿನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗಿ

Promotion

ಇಂದು ಭಾರತೀಯ ನೌಕಾಪಡೆ ದಿನಾಚರಣೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ನೌಕಾಪಡೆ ಸಿಬ್ಬಂದಿಗೆ ಶುಭಾಶಯ ತಿಳಿಸಿದ್ದಾರೆ.

ಈ ಬಾರಿ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆಚರಣೆ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್.ಹರಿಕುಮಾರ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಇತರರು ಪಾಲ್ಗೊಳ್ಳಲಿದ್ದಾರೆ.