ದೇಶದಲ್ಲಿ ಒಂದೇ ದಿನ  ಹೊಸದಾಗಿ 36,401 ಕೋವಿಡ್  ಪ್ರಕರಣಗಳು ಪತ್ತೆ.

ನವದೆಹಲಿ,ಆಗಸ್ಟ್,19,2021(www.justkannada.in):   ದೇಶದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 36,401 ಕೋವಿಡ್  ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3, 64, 129ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೊರೊನಾಗೆ 530 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 433049 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,64,129 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 39,157 ಜನರು ಗುಣಮುಖರಾಗಿದ್ದಾರೆ. ನಿನ್ನೆ ದೇಶದಲ್ಲಿ 18,73,757 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 56,36,336 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 56,64,88,433 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: total – 36,401 -new cases –corona-positive- detected – single day – country.