ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಮತ್ತೊಂದು ಅವಘಡ: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರ…

Promotion

ಬೆಂಗಳೂರು, ಮೇ 16,2019(www.justkannada.in):  ಬೆಸ್ಕಾಂ ಮತ್ತು ಬಿಬಿಎಂಪಿ ನಿರ್ಲಕ್ಷ್ಯಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ನಡೆದಿದೆ.  ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ.

ನಗರದ ಮತ್ತಿಕೆರೆಯ ನೇತಾಜಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.  ನಿಖಿಲ್ (14) ಅಸ್ವಸ್ಥ ಬಾಲಕ.  ಕ್ರಿಕೆಟ್  ಆಡುತ್ತಿದ್ದ ವೇಳೆ  ರಸ್ತೆಯ ಮೇಲೆ ಬಿದ್ದಿದ್ದ ಹೈಟೆನ್ಷನ್ ತಂತಿ  ಬಾಲಕನಿಗೆ ತಗುಲಿದ್ದು, ಈ ಸಂದರ್ಭದಲ್ಲಿ ಬಾಲಕ ನಿಖಿಲ್ ಅಸ್ವಸ್ಥನಾಗಿದ್ದಾನೆ. ತಕ್ಷಣ ಈತನನ್ನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಇದೀಗ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗಷ್ಟೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಯಲ್ಲಿ ಒಂದು ವಾರಗಳ ಕಾಲ ಜೀವನ್ಮರಣದ ನಡುವೆ ಹೋರಾಡಿದ್ದ ಬಾಲಕ ನಂತರ ಚೇತರಿಸಿಕೊಂಡಿದ್ದ.  ಈಗ ಅಂಥದ್ದೇ ಘಟನೆ ಮರುಕಳಿಸಿದೆ.

Key words: touching – electrical –wire-: boy- condition -serious -bangalore