ಎರಡು ದಿನಗಳ ಕಾಲ ಮೈಸೂರು ಪ್ರವಾಸ: ಅ.17ರ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಿಎಂ ಬಿಸ್ ವೈ….

Promotion

ಮೈಸೂರು,ಅಕ್ಟೋಬರ್,17,2020(www.justkannada.in): ಕೋವಿಡ್ ಹಿನ್ನೆಲೆ  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಸರಳಾ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ಮುಂದಾಗಲಿದ್ದು ಅಕ್ಟೋಬರ್ 15ರಂದು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ದೊರೆಯಲಿದೆ.jk-logo-justkannada-logo

ಮೈಸೂರು ದಸರಾ ಹಿನ್ನೆಲೆ ಮೈಸೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 16ರಂದು ಮೈಸೂರಿಗೆ ಆಗಮಿಸಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ. ನಾಡಹಬ್ಬ ದಸರಾ ಆಚರಣೆ ಹಾಗೂ ಕೋವಿಡ್ ನಿಯಂತ್ರಣ ‌ಕುರಿತು ಸಭೆ ನಡೆಸಲಿದ್ದಾರೆ.

ಮೈಸೂರಿನ ಸರ್ಕಾರಿ ಅಥಿತಿ ಗೃಹದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಲಿದ್ದಾರೆ. ನಂತರ ಅಕ್ಟೋಬರ್ 17ರಂದು ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಿಎಸ್ ವೈ ಭಾಗಿಯಾಗಿ ಅಧಿಕೃತವಾಗಿ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿಲಿದ್ದಾರೆ.tour-mysore-two-days-cm-bs-yeddyurappa-dasara-inauguration

ದಸರಾ ಉದ್ಘಾಟಕರಾಗಿಆಯ್ಕೆಯಾಗಿರುವ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರು ಚಾಮುಂಡಿಬೆಟ್ಟದಲ್ಲಿ ಅಧಿಕೃತವಾಗಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

Key words: Tour – Mysore – two days- CM bs yeddyurappa-Dasara inauguration