ಬೆಂಗಳೂರಿನಲ್ಲಿ ಟೋಯಿಂಗ್ ಅವಶ್ಯಕತೆ ಇದೆ- ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ.

Promotion

ಬೆಂಗಳೂರು,ಸೆಪ್ಟಂಬರ್,16,2022(www.justkannada.in):  ಟೋಯಿಂಗ್ ಪರಿಶೀಲನೆಗೆ 6 ವಾರಗಳ ಕಾಲ  ಹೈಕೋರ್ಟ್ ಅವಕಾಶ ನೀಡಿರುವ ಬೆನ್ನಲ್ಲೆ ಬೆಂಗಳೂರಿನಲ್ಲಿ ಟೋಯಿಂಗ್ ಜಾರಿಗೆ ಪೊಲೀಸ್ ಇಲಾಖೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಬೆಂಗಳೂರಿನಲ್ಲಿ ಟೋಯಿಂಗ್ ಅವಶ್ಯಕತೆ ಇದೆ. ಯಾವ ಪದ್ದತಿಯಲ್ಕಿ ಟೋಯಿಂಗ್ ಮಾಡಬೇಕು ಈ ಬಗ್ಗೆ ಪೊಲೀಸ್ ಇಲಾಖೆ ನಿರ್ಧರಿಸುತ್ತೆ. ಈ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದಿದ್ದಾರೆ.

ಈ ಮೂಲಕ ಸಿಲಿಕಾನ್ ಸಿಟಿ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದ್ದು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಮುನ್ನ ಸವಾರರು ಯೋಚಿಸಬೇಕಿದೆ.

Key words: towing -Bengaluru – Police Commissioner -Pratap Reddy