ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದ ಸಾರಿಗೆ ಇಲಾಖೆ ಸಿಬ್ಬಂದಿಗಳು…

Promotion

ಬೆಂಗಳೂರು,ಜೂ,27,2019(www.justkannada.in):  ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ಇಲಾಖೆ ಸಿಬ್ಬಂದಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಪ್ರತಿಭಟನೆಗೂ ಮುನ್ನ ಸಾರಿಗೆ ನೌಕರರ ಸಂಘಟನೆಯ ಮುಖಂಡರು ಇಂದು ಸದಾಶಿವನಗರದ ಡಿಸಿಎಂ ಪರಮೇಶ್ವರ್ ಕಚೇರಿಗೆ ತೆರಳಿ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಸರ್ಕಾರ ತಮ್ಮ ಬೇಡಿಕೆಗಳನ್ನ ಈಡೇರಿಸಬೇಕು ಎಂದು ಸಾರಿಗೆ ನೌಕರರು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಡಿಸಿಎಂ ಪರಮೇಶ್ವರ್ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಂದ ನಂತರ ಈ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಭರವಸೆ ನೀಡಿದರು.

ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾರಿಗೆ ಇಲಾಖೆ ನೌಕರರು ನಗರದ ಲಾಲ್ ಬಾಗ್ ಮುಖ್ಯದ್ವಾರದಿಂದ ಶಾಂತಿನಗರ ಕೆಎಸ್ ಆರ್ ಟಿಸಿ ಕಚೇರಿಗೆ ರ್ಯಾಲಿ ಮೂಲಕ ತೆರಳಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕರಿಗೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಸಲ್ಲಿಸಲಿದ್ದಾರೆ.

Key words: Transport -department –staff-appealed – DCM Dr G Parameshwar -various demands.